ಅಗ್ನಿ ಅವಘಡಕ್ಕೆ ಡಿಡಿಪಿಐ ಇಲಾಖೆ ಕಾರಣ!

thaluru kishore
Published on

ಮಡಿಕೇರಿ: ಹರ್‌ಮಂದಿರ ಶಾಲೆಯ ವಸತಿ ನಿಲಯದಲ್ಲಿ ಸಂಭವಿಸಿದ ಅಗ್ನಿ ಅವಘಡಕ್ಕೆ ಸಾರ್ವಜನಿಕರ ಶಿಕ್ಷಣ ಇಲಾಖೆ ಅಧಿಕಾರಿಗಳು ಕಾರಣ ಎಂದು ಆರೋಪಿಸಿರುವ ಬಿಜೆಪಿ ಜಿಲ್ಲಾ ವಕ್ತಾರ ತಳೂರು ಕಿಶೋರ್, ಘಟನಾ ಸಂಬಂಧ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿಕ್ಷಣ ಸಂಸ್ಥೆ ನಡೆಸಲು ಶಾಲೆಯ ಸಾಮರ್ಥ್ಯ ಪ್ರಮಾಣ ಪತ್ರವನ್ನು ಜಿಲ್ಲಾ ನೋಂದಣಿ ಇಲಾಖೆಯಿಂದ ಪಡೆದಿರಬೇಕು. ಶಾಲೆಯ ಭೂಪರಿವರ್ತನೆ ಕುರಿತು ದಾಖಲೆಗಳಿರಬೇಕು. ಈ ಸಂಬಂಧ ಸಾರ್ವಜನಿಕರ ಶಿಕ್ಷಣ ಇಲಾಖೆಗೆ ಮಾಹಿತಿ ಕೇಳಿದ ಸಂದರ್ಭ ಇಲಾಖೆಯಿಂದ ಯಾವುದೇ ಉತ್ತರ ಬರಲಿಲ್ಲ. ಆದ್ದರಿಂದ ಶಾಲೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಅವರು, ಘಟನೆ ಕುರಿತು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಮನು ಮಂಜುನಾಥ್, ಬಿಜೆಪಿ ಮುಖಂಡರಾದ ಎಂ.ಪಿ.ಬಾಲಕೃಷ್ಣ, ಕೂಪದಿರ ದೊರೆ ಮಾದಪ್ಪ,, ಎಂ.ಜೆ.ಅನುದೀಪ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net