

ವಿಟ್ಲ: ಪುಣಚ ಗ್ರಾಮದ ನೆಲ್ಲಿಗುಡ್ಡೆ ಜರಿಮೂಲೆ ಸಮೀಪ ಗುಂಡಿಯೊಂದರಲ್ಲಿ ಕೊಳೆತ ಮೃತದೇಹ ಹಾಗೂ ಮೊಬೈಲ್ ಪತ್ತೆಯಾಗಿದೆ. ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ.
ಸೊಪ್ಪು ಸೌದೆ ತರಲು ಗುಡ್ಡಕ್ಕೆ ಹೋದ ಸ್ಥಳೀಯ ನೀವಾಸಿಗಳಿಗೆ ಮೊಬೈಲ್ ಪತ್ತೆಯಾಗಿದೆ. ಇದನ್ನು ಗಮನಿಸಿ ಅಕ್ಕಪಕ್ಕದ ನೋಡಿದ ಸಂದರ್ಭ ಮೃತದೇಹ ಪತ್ತೆಯಾಗಿದ್ದು, ಭಯಗೊಂಡು ಓಡಿಹೋಗಿದ್ದಾರೆನ್ನಲಾಗಿದೆ. ಪಕ್ಕದಲ್ಲಿರುವ ಮರದಲ್ಲಿ ಬಳ್ಳಿಯೊಂದು ನೇತಾಡುತ್ತಿದ್ದು, ಮೃತದೇಹ ನೆಲದಲ್ಲಿ ಬಿದ್ದುಕೊಂಡಿದೆ ಎನ್ನಲಾಗಿದೆ. ಈ ಬಗ್ಗೆ ಪೊಲೀಸರಲ್ಲಿ ಮಾತ್ರ ಮಾಹಿತಿಯಿಲ್ಲ.