ನಾಪತ್ತೆಯಾಗಿದ್ದ ಬಾಲಕಿ ಮೃತದೇಹ ಪತ್ತೆ

ranjita death
ಮೃತ ಬಾಲಕಿ ರಂಜಿತಾ
Published on

ಶಿವಮೊಗ್ಗ: ಭದ್ರಾವತಿ ತಾಲೂಕಿನ ಶಿವರಾಮನಗರದಿಂದ ನಾಪತ್ತೆಯಾಗಿದ್ದ 17 ವರ್ಷದ ಬಾಲಕಿಯ ಮೃತದೇಹ ಬಿದರೆ ಸಮೀಪದ ಭದ್ರಾ ಎಡನಾಲೆಯಲ್ಲಿ ಶನಿವಾರ ಪತ್ತೆಯಾಗಿದೆ.

ಶಿವರಾಮ ನಗರದ ಬೆಟ್ಟಸ್ವಾಮಿ ಎಂಬುವರ ಪುತ್ರಿ ರಂಜಿತಾ ಮೃತ ಬಾಲಕಿ. ಫ್ಯಾಕ್ಟರಿ ಕೆಲಸಕ್ಕೆ ಹೋಗುತ್ತಿದ್ದ ಬಾಲಕಿ ಐದಾರು ದಿನಗಳಿಂದ ನಾಪತ್ತೆಯಾಗಿದ್ದಳು. ಆಕೆಯ ವ್ಯಾನಿಟಿ ಬ್ಯಾಗ್, ಚಪ್ಪಲಿ ಮತ್ತು ಗುರುತಿನ ಚೀಟಿ ಲಕ್ಷ್ಮೀಪುರದ ರೈಲ್ವೆ ಸೇತುವೆ ಮೇಲೆ ಪತ್ತೆಯಾಗಿತ್ತು. ಹಾಗಾಗಿ ಈ ಬಗ್ಗೆ ಶಿವಮೊಗ್ಗ ರೈಲ್ವೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ನಾಲ್ಕೈದು ದಿನ ರೈಲ್ವೆ ಪೊಲೀಸರು ಹುಡುಕಾಟ ನಡೆಸಿದ್ದು ಬಿದರೆ ಸಮೀಪದ ಭದ್ರಾ ಎಡನಾಲಾದಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿದೆ. ರೈಲು ಡಿಕ್ಕಿಯಾಗಿ ಮೃತಪಟ್ಟಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯ ಶವಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ರೈಲ್ವೆ ಪೊಲೀಸರು ಹಸ್ತಾಂತರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net