ನಗರಸಭಾಧ್ಯಕ್ಷೆ ಪತಿ ಮೃತದೇಹ ಹೊಳೆಯಲ್ಲಿ ಪತ್ತೆ

Death Case
Published on

ಕಾಸರಗೋಡು: ನೀಲೇಶ್ವರ ನಗರಸಭಾ ಅಧ್ಯಕ್ಷೆ ಟಿ.ವಿ ಶಾಂತಾ ಅವರ ಪತಿ ಪೋಡೋಂತುರುತ್ತಿ ನಿವಾಸಿ ಕುಞಿಕಣ್ಣನ್(72) ಎಂಬುವರ ಮೃತದೇಹ ಮನೆ ಸನಿಹದ ತೇಜಸ್ವಿನಿ ಹೊಳೆಯಲ್ಲಿ ಪತ್ತೆಯಾಗಿದೆ. ವ್ಯಕ್ತಿಯೊಬ್ಬರು ತೇಜಸ್ವಿನಿ ಹೊಳೆಗೆ ಬಿದ್ದಿರುವ ಬಗ್ಗೆ ಮಾಹಿತಿ ಪಡೆದ ಸ್ಥಳೀಯರು ವ್ಯಕ್ತಿಯನ್ನು ಮೇಲಕ್ಕೆತ್ತಿ ನೀಲೇಶ್ವರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಪ್ರಯೋಜನವಾಗಿರಲಿಲ್ಲ. ಪ್ರಕರಣಕ್ಕೆ ಸಂಬಂಧಿಸಿ ನೀಲೇಶ್ವರ ಠಾಣೆ ಪೊಲೀಸರು ಅಸಹಜ ಸವಿನ ಬಗ್ಗೆ ಕೇಸು ದಾಖಲಿಸಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net