

ಹೆಬ್ರಿ: ಶಿವಪುರ ಗ್ರಾಮದ ಕಾಳಾಯಿ ಮುಳ್ಳುಗುಡ್ಡೆ ನಿವಾಸಿ ರವಿರಾಜ್ ಶೆಟ್ಟಿಗಾರ್ ಅವರ ಮೃತದೇಹ ಶುಕ್ರವಾರ ಬಾವಿಯಲ್ಲಿ ಪತ್ತೆಯಾಗಿದ್ದು, ಮೃತದೇಹದ ತಲೆಯ ಹಿಂಭಾಗದಲ್ಲಿ ಗಾಯ ಕಂಡು ಬಂದ ಹಿನ್ನೆಲೆಯಲ್ಲಿ ಕೊಲೆ ಶಂಕೆ ವ್ಯಕ್ತವಾಗಿದೆ. ಮನೆಯ ಮಾಡಿನ ರಿಪೇರಿ ಸಂಬಂಧ ಸಹೋದರರ ಮಧ್ಯೆ ವೈಮನಸ್ಸು ಉಂಟಾಗಿತ್ತು. ಸಹೋದರನಿಂದಲೇ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಎಸ್‌ಪಿ ಎನ್. ವಿಷ್ಣುವರ್ಧನ್ ಮತ್ತು ಎಎಸ್‌ಪಿ ಕುಮಾರ್‌ಚಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹೆಬ್ರಿ ಠಾಣೆಯಲ್ಲಿ ದೂರು ದಾಖಲಾಗಿದೆ.