ಬೆಳೆ ವಿಮೆಗೆ ನೋಂದಾಯಿಸಲು ಕಾಲಾವಕಾಶ: ಪ್ರಮೋದ್

pramodh
Published on

ಮಡಿಕೇರಿ: ಬೆಳೆ ವಿಮೆಗೆ ನೋಂದಾಯಿಸಲು ಆ.೭ ರವರೆಗೆ ಅವಧಿ ವಿಸ್ತರಿಸಲಾಗಿದೆ ಎಂದು ತೋಟಗಾರಿಕೆ ಉಪ ನಿರ್ದೇಶಕ ಪ್ರಮೋದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


೨೦೨೩-೨೪ನೇ ಸಾಲಿನಲ್ಲಿ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯನ್ನು ಕೊಡಗು ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಜಿಲ್ಲೆಯ ಮುಖ್ಯ ಬಹುವಾರ್ಷಿಕ ಬೆಳೆಗಳಾದ ಕಾಳುಮೆಣಸು ಮತ್ತು ಅಡಿಕೆ ಬೆಳೆಗಳಿಗೆ ರೈತರು ನೊಂದಾಯಿಸಿಕೊಳ್ಳಲು ಜು.೩೧ ರವರೆಗೆ ಅಧಿಸೂಚನೆ ಹೊರಡಿಸಲಾಗಿತ್ತು. ಆದರೆ, ಸರ್ಕಾರದ ಆದೇಶದಂತೆ ಆ.೭ ರವರೆಗೆ ಬೆಳೆ ವಿಮೆ ಪ್ರೀಮಿಯಂ ಪಾವತಿಗೆ ಅವಧಿ ವಿಸ್ತರಿಸಲಾಗಿದೆ ಎಂದು ತಿಳಿಸಿದ್ದಾರೆ.


ರೈತರು ಹತ್ತಿರದ ಬ್ಯಾಂಕ್‌ಗಳಲ್ಲಿ ಅಥವಾ ಗ್ರಾಮ ಪಂಚಾಯತ್ ಮಟ್ಟದಲ್ಲಿರುವ ಗ್ರಾಮ ಒನ್ ಕೇಂದ್ರಗಳಲ್ಲಿ ಅಥವಾ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ವಿಮೆ ಯೋಜನೆಗೆ ನೊಂದಾಯಿಸಿಕೊಳ್ಳಬಹುದು ಎಂದು ಪ್ರಮೋದ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net