ತಿಪಟೂರಿನಲ್ಲಿ ಭೀಕರ ರಸ್ತೆ ಅಪಘಾತ: ಬೈಕ್​ ಸವಾರ ಸ್ಥಳದಲ್ಲೇ ಸಾವು

Accidnt
Published on

ತುಮಕೂರು: ಬೈಕ್ ಹಾಗೂ ಬೊಲೆರೋ ಗೂಡ್ಸ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್​ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಿಪಟೂರು ತಾಲೂಕಿನ ಹಾಲೇನಹಳ್ಳಿ ಗೇಟ್​ ಬಳಿ ನಡೆದಿದೆ.

ತಿಪಟೂರು ಕಡೆಯಿಂದ ಹಾಲ್ಕುರಿಕೆ ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದರು, ಇದೇ ವೇಳೆ ವೇಗವಾಗಿ ಬಂದ ಬೊಲೆರೋ ಗೂಡ್ಸ್​ ವಾಹನ ಬೈಕ್​ಗೆ ಡಿಕ್ಕಿ ಹೊಡೆದ ರಭಸಕ್ಕೆ ಮಂಜುನಾಥನ ತಲೆ ಛಿದ್ರವಾಗಿ, ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಆತನ ಪತ್ನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ತಿಪಟೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ಹೊನ್ನವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.(ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net