ನಗರಸಭೆ ಪೌರಾಯುಕ್ತ ಹನುಮಂತರಾಜು ನಿಧನ

CTD 30 Hanumantharaju--uu
Published on

ಚಿತ್ರದುರ್ಗ: ಎರಡು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಚಿತ್ರದುರ್ಗ ನಗರಸಭೆ ಪೌರಾಯುಕ್ತ ಜೆ.ಟಿ.ಹನುಮಂತರಾಜು (56) ಬುಧವಾರ ತಮ್ಮ ನಿವಾಸದಲ್ಲಿ ನಿಧನರಾದರು. ಪತ್ನಿ, ಇಬ್ಬರು ಪುತ್ರಿಯರು ಇದ್ದಾರೆ. ಅಣ್ಣನ ಮಗ ಅಮೆರಿಕಾದಿಂದ ಬರಬೇಕಿರುವ ಕಾರಣ ಡಿ.2ರ ಶುಕ್ರವಾರ ಬೆಳಗ್ಗೆ 10ಕ್ಕೆ ಸ್ವಗ್ರಾಮ ಜಗಳೂರಿನ ಸಮೀಪದ ಸ್ವಂತ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಅದಕ್ಕೂ ಮೊದಲು ನಗರಸಭೆ ಆವರಣದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ನಗರಸಭೆ ಇಂಜಿನಿಯರ್ ಕಿರಣ್‌ಕುಮಾರ್ ತಿಳಿಸಿದ್ದಾರೆ. ನಿಧನದ ವಿಷಯ ತಿಳಿಯುತ್ತಿದ್ದಂತೆ ನಗರಸಭೆ ಸದಸ್ಯರು, ಗಣ್ಯರು, ಸಾರ್ವಜನಿಕರು ಮೃತರ ನಿವಾಸಕ್ಕೆ ತೆರಳಿ ಅಂತಿಮ ದರ್ಶನ ಪಡೆದರು. ಚಿತ್ರದುರ್ಗ ನಗರಸಭೆಯಲ್ಲಿ 2019ರ ಸೆಪ್ಟೆಂಬರ್‌ನಿಂದ ಕಾರ್ಯನಿರ್ವಹಿಸುತ್ತಿದ್ದ ಹನುಮಂತರಾಜು, ಇದಕ್ಕೂ ಮುನ್ನ ಚಳ್ಳಕೆರೆ ನಗರಸಭೆಯಲ್ಲಿ ನಾಲ್ಕೂವರೆ ವರ್ಷ, ಜಗಳೂರಿನಲ್ಲಿ ಮುಖ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.

(ಸಿಟಿಡಿ 30 ಹನುಮಂತರಾಜು)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net