ಆಟೋ ಚಾಲಕ ಅನುಮಾನಾಸ್ಪದ ಸಾವು

death
Published on

ಕಿನ್ನಿಗೋಳಿ: ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕಿನ್ನಿಗೋಳಿ ಸಮೀಪದ ತಾಳಿಪಾಡಿ ಗೋಳಿಜೋರಾ ನೀರಪಲ್ಕೆ ನಿವಾಸಿ ಆಟೋ ಚಾಲಕ ಪ್ರಶಾಂತ್ ಶೆಟ್ಟಿಗಾರ(38) ತಮ್ಮ ಮನೆಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ.

ಪ್ರಶಾಂತ್ ಶೆಟ್ಟಿಗಾರ್ ನಾಲ್ಕು ವರ್ಷಗಳಿಂದ ಕಿನ್ನಿಗೋಳಿಯಲ್ಲಿ ಆಟೋ ಚಾಲಕರಾಗಿ ದುಡಿಯುತ್ತಿದ್ದು, ಭಾನುವಾರ ರಾತ್ರಿ 11 ಗಂಟೆಗೆ ಮನೆಗೆ ಬಂದು ಊಟ ಮಾಡಿ ಮಲಗಿದ್ದರು. ಬೆಳಗ್ಗೆ ಸುಮಾರು ಎಂಟು ಗಂಟೆಗೆ ಕೋಣೆಯಿಂದ ಹೊರಬಾರದಿರುವುದನ್ನು ಗಮನಿಸಿ ತಾಯಿ ಬಂದು ನೋಡಿದಾಗ ಪ್ರಶಾಂತ್ ಅವರು ಮಂಚದ ಕೆಳಗೆ ಶವವಾಗಿ ಪತ್ತೆಯಾಗಿದ್ದಾರೆ.

ಮಂಚದ ಮೇಲೆ ಮದ್ಯದ ಬಾಟಲಿಗಳು ಪತ್ತೆಯಾಗಿದ್ದು, ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗಿದೆ. ಮೂಲ್ಕಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ತನಿಖೆ ನಡೆಸುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net