ನದಿಯಲ್ಲಿ ಮುಳುಗಿ ಬಾಲಕಿಯರಿಬ್ಬರ ಸಾವು

death
Published on

ಬಂಟ್ವಾಳ: ನದಿಯಲ್ಲಿ ಆಟವಾಡುತ್ತಿದ್ದ ಸಂದರ್ಭ ನೀರಿನಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತಪಟ್ಟ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನಾವೂರ ಎಂಬಲ್ಲಿ ಭಾನುವಾರ ಸಂಜೆ ನಡೆದಿದೆ.

ಉಳ್ಳಾಲ ನಿವಾಸಿಗಳಾದ ಅನ್ಸಾರ್ ಅವರ ಪುತ್ರಿ ಅಶ್ರಾ (11) ಹಾಗೂ ಇಲಿಯಾಸ್ ಅವರ ಪುತ್ರಿ ಮರಿಯಮ್ ನಾಶೀಯಾ (14 ) ಮೃತ ಬಾಲಕಿಯರು. ಉಳ್ಳಾಲದಲ್ಲಿ ವಾಸಿಸುತ್ತಿದ್ದ ಇಲಿಯಾಸ್ ನಾವೂರದಲ್ಲಿರುವ ಸಂಬಂಧಿಕರ ಮನೆಗೆ ಆಗಮಿಸಿದ್ದರು. ಸಂಜೆ ವೇಳೆ ಮನೆಯವರ ಜತೆಗೆ ನಾವೂರದ ನೀರಕಟ್ಟೆ ಎಂಬಲ್ಲಿ ನೇತ್ರಾವತಿ ನದಿಗೆ ತೆರಳಿದ್ದರು.

ಮನೆಯವರ ಮುಂದೆಯೇ ಮಕ್ಕಳು ನೀರಿನಲ್ಲಿ ಆಟ ಆಡುತ್ತಿದ್ದ ಸಂದರ್ಭ ಮುಳುಗಿದ್ದು, ಈಜು ಬಾರದ ಕಾರಣ ಇಲಿಯಾಸ್ ಹಾಗೂ ಸಂಬಂಧಿಕರಿಗೆ ಮಕ್ಕಳನ್ನು ರಕ್ಷಿಸಲು ಅಸಾಧ್ಯವಾಗಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net