ವಿದ್ಯುತ್ ತಂತಿ ತಗುಲಿ ಮೃತ್ಯು

Electric Shock (2)
Published on

ಬಂಟ್ವಾಳ: ಶಾಮಿಯಾನ ಅಂಗಡಿಯ ಕೆಲಸಗಾರ ವಿದ್ಯುತ್ ತಂತಿ ತಗುಲಿ ಮೃತಪಟ್ಟ ಘಟನೆ ಕಡೇಶಿವಾಲಯ ಸಮೀಪ ಕೆಮ್ಮನ್ ಕಾಡಬೆಟ್ಟು ಎಂಬಲ್ಲಿ ನಡೆದಿದೆ. ಬಿಹಾರದ ಕುಂದನ್ ಕುಮಾರ್ ಮೃತರು. ಲಾರಿಯಿಂದ ಶಾಮಿಯಾನ ಸಾಮಾಗ್ರಿಗಳನ್ನು ಕೆಳಗಿಳಿಸುವ ವೇಳೆ ವಿದ್ಯುತ್ ತಂತಿ ತಾಗಿ ನಾಲ್ವರು ಕೆಲಸಗಾರರಿಗೆ ಗಾಯವಾಗಿದ್ದು, ಅದರಲ್ಲಿ ಓರ್ವ ಗಂಭೀರವಾಗಿ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿ ಮಂಗಳೂರು ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಮೃತಪಟ್ಟರು. ನಾಲ್ವರು ಕೆಲಸಗಾರರು ಉತ್ತರಭಾರತ ಮೂಲದವರು ಎಂದು ಹೇಳಲಾಗಿದ್ದು, ಬಂಟ್ವಾಳ ಗ್ರಾಮಾಂತರ ಪೋಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net