ಮನೆ ಮೇಲಿಂದ ಬಿದ್ದು ಸಾವು

Crime LOGO
Published on

ಬ್ಯಾಡಗಿ: ಮನೆ ಮೇಲೆ ತಗಡು ಹಾಕುತ್ತಿದ್ದ ವೇಳೆ ಕಾಲು ಜಾರಿ ಬಿದ್ದು ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ತಾಲೂಕಿನ ತಿಮಕಾಪುರ ಗ್ರಾಮದಲ್ಲಿ ಗುರುವಾರ ನಡೆದಿದೆ. ಕಲ್ಲಪ್ಪ ನಾಗಪ್ಪ ಅಂಗರಗಟ್ಟಿ (50) ಮೃತ ವ್ಯಕ್ತಿ ಎಂದು ತಿಳಿದುಬಂದಿದೆ. ಮನೆಯ ಮೇಲ್ಛಾವಣಿಗೆ ಕಲ್ಲಪ್ಪ ಬುಧವಾರ ತಗಡು ಹಾಕಲು ಹೋಗಿದ್ದಾಗ ಕುಸಿದು ಬಿದ್ದು ತಲೆಗೆ ತೀವ್ರ ಗಾಯವಾಗಿತ್ತು. ತಕ್ಷಣ ಹಾವೇರಿ ಜಿಲ್ಲಾಸ್ಪತ್ರೆಗೆ ಸೇರಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಈ ಕುರಿತು ಕಾಗಿನೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net