ಮದ್ಯದ ಮತ್ತಿನಲ್ಲಿ ವಿಷ ಕುಡಿದು ಸಾವು

Poison 26
Published on

ಹಾನಗಲ್ಲ: ಮದ್ಯ ಸೇವಿಸಿದ ಅಮಲಿನಲ್ಲಿ ವಿಷ ಕುಡಿದು ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ತಾಲೂಕಿನ ಇನಾಂನೀರಲಗಿ ಗ್ರಾಮದಲ್ಲಿ ಶುಕ್ರವಾರ ಸಂಭವಿಸಿದೆ.

ಅಶೋಕ ಪರಸಪ್ಪ ಸುರಳೇಶ್ವರ (42) ಮೃತ ದುರ್ದೈವಿ. ಈತ ವಿಪರೀತ ಮದ್ಯ ಸೇವನೆ ಮಾಡುತ್ತಿದ್ದ.

ಮದ್ಯ ಸೇವಿಸಿದ ಅಮಲಿನಲ್ಲಿ ಮನೆಯಲ್ಲಿ ಒಬ್ಬನೇ ಇದ್ದಾಗ ವಿಷ ಸೇವಿಸಿದ್ದಾನೆ. ಕೂಡಲೇ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಹಾವೇರಿ ಜಿಲ್ಲಾಸ್ಪತ್ರೆಗೆ ಸಾಗಿಸುತ್ತಿದ್ದ ಸಮಯದಲ್ಲಿ ಮೃತಪಟ್ಟಿದ್ದಾನೆ.

ಹಾನಗಲ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net