ಬೈಕ್ ಡಿಕ್ಕಿಯಾಗಿ ಪಾದಚಾರಿ ಸಾವು

train accident sheeps died hitnal village koppal
Published on

ಹೊಳೆನರಸೀಪುರ: ತಾಲೂಕಿನ ಎಸ್.ಅಂಕನಹಳ್ಳಿ ರಕ್ಷಿತಾರಣ್ಯ ಪ್ರದೇಶದ ಸಮೀಪ ಹೆದ್ದಾರಿಯಲ್ಲಿ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ಮಲುಗನಹಳ್ಳಿ ಗ್ರಾಮದ ಶಂಕರಶೆಟ್ಟಿ(61) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಎಸ್.ಅಂಕನಹಳ್ಳಿ ರಕ್ಷಿತ ಅರಣ್ಯ ಪ್ರದೇಶದ ಸಮೀಪ ಹೆದ್ದಾರಿಯಲ್ಲಿ ಭಾನುವಾರ ರಾತ್ರಿ ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದ ಶಂಕರಶೆಟ್ಟ ಅವರಿಗೆ ಮಲ್ಲಪ್ಪನಹಳ್ಳಿ ಗ್ರಾಮದ ಸುಮಂತ್ ಹಾಗೂ ಪುನೀತ್ ಎಂಬುವವರು ಇದ್ದ ದ್ವಿಚಕ್ರ ವಾಹನ ಡಿಕ್ಕಿ ಹೊಡೆದಿದೆ. ಶಂಕರಶೆಟ್ಟರು ಸ್ಥಳದಲ್ಲೇ ಮೃತಪಟ್ಟಿದ್ದು, ಸುಮಂತ್ ಹಾಗೂ ಪುನೀತ್ ಗಾಯಗೊಂಡು ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ಹಿಮ್ಸ್ ಆಸ್ಪತ್ರೆಗೆ ಕಳುಹಿಸಲಾಗಿದೆ. ಪಟ್ಟಣದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net