ಬಸ್ ಡಿಕ್ಕಿಯಾಗಿ ಸಾವು

ACCIDENT
Published on

ನರಗುಂದ: ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಎಮ್ಮೆ ಮತ್ತು ಎಮ್ಮೆ ಮಾಲೀಕ ಸಾವನ್ನಪ್ಪಿರುವ ಘಟನೆ ಪಟ್ಟಣದ ಹುಬ್ಬಳ್ಳಿ ರಸ್ತೆಯಲ್ಲಿ ಗುರುವಾರ ನಡೆದಿದೆ.

ಪಟ್ಟಣದ ನಿಸರ್ಗ ಧಾಬಾ ಬಳಿಯ ನಿವಾಸಿ ವಿಠ್ಠಲ ಮಹಾದೇವಪ್ಪ ಸೂರ್ಯವಂಶಿ (65) ಮೃತ ದುರ್ದೈವಿ. ಇವರು ಎಂದಿನಂತೆ ತಮ್ಮ ಎಮ್ಮೆಗಳನ್ನು ಮೇಯಿಸಿಕೊಂಡು ಸಂಜೆ 5 ಗಂಟೆ ಸುಮಾರಿಗೆ ಮನೆಗೆ ತೆರಳುತ್ತಿದ್ದಾಗ ಹುಬ್ಬಳ್ಳಿಯಿಂದ ನರಗುಂದ ಮಾರ್ಗವಾಗಿ ಬಾಗಲಕೋಟೆಗೆ ತೆರಳುತ್ತಿದ್ದ ಬಸ್ ಡಿಕ್ಕಿ ಹೊಡೆದಿದೆ. ಘಟನೆಗೆ ಬಸ್ ಚಾಲಕ ಸುರೇಶ ಹಿರೇಮಠ ನಿರ್ಲಕ್ಷ್ಯವೇ ಮುಖ್ಯ ಕಾರಣ ಎನ್ನಲಾಗಿದೆ. ಡಿಕ್ಕಿ ರಭಸಕ್ಕೆ ಎಮ್ಮೆ ಸ್ಥಳದಲ್ಲೇ ಮೃತಪಟ್ಟಿದೆ. ಗಂಭೀರವಾಗಿ ಗಾಯಗೊಂಡಿದ್ದ ಎಮ್ಮೆ ಮಾಲೀಕ ವಿಠ್ಠಲ ಅವರನ್ನು ನರಗುಂದದ ಬಾಬಾಸಾಹೇಬ ಭಾವೆ ಸರ್ಕಾರಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿದ್ದಾರೆ. ಈ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net