

ಸಿದ್ದಾಪುರ: ಕಾರು ಪಲ್ಟಿ ಹೊಡೆದ ಪರಿಣಾಮ ಚಾಲಕ ಮೃತಪಟ್ಟ ಘಟನೆ ತಾಲೂಕಿನ ಬಿದ್ರಕಾನ ತುಪ್ಪದಜಡ್ಡಿ ಸಮೀಪ ಬುಧವಾರ ನಡೆದಿದೆ.
ಅಶೋಕ ಮಂಜುನಾಥ ಹೆಗಡೆ (64) ಮೃತಪಟ್ಟವರು. ಹಾರ್ಸಿಕಟ್ಟಾಕಡೆಯಿಂದ ಸಿದ್ದಾಪುರ ಕಡೆಗೆ ಹೋಗುವಾಗ ನಿಯಂತ್ರಣ ತಪ್ಪಿ ಅಪಘಾತವಾಗಿದ್ದು, ಅಶೋಕ ಅವರ ತಲೆ ಹಾಗೂ ಎದೆಗೆ ತೀವ್ರ ಪೆಟ್ಟಾಗಿತ್ತು. ಕೂಡಲೆ ಸಿದ್ದಾಪುರ ಸರ್ಕಾರಿ ಆಸ್ಪತ್ರೆ ಕರೆದೊಯ್ದು ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಶಿರಸಿಗೆ ಕರೆದೊಯ್ಯುತ್ತಿರುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.
ಅಶೋಕ ಮಂಜುನಾಥ ಹೆಗಡೆ ಅವರು ಹಾರ್ಸಿಕಟ್ಟಾ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಹಾರ್ಸಿಕಟ್ಟಾ ಅಶೋಕ ಪ್ರೌಢಶಾಲೆಯ ಆಡಳಿತ ಮಂಡಳಿ ನಿರ್ದೇಶಕರಾಗಿ ಹಾಗೂ ವಿವಿಧ ಸಂಘ-ಸಂಸ್ಥೆ, ಧಾರ್ವಿುಕ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಅವರಿಗೆ ಪತ್ನಿ, ಪುತ್ರ ಹಾಗೂ ಪುತ್ರಿ ಇದ್ದಾರೆ.