ಮಲ್ಲಯ್ಯನಪುರ ಚೆಕ್ ಡ್ಯಾಂನಲ್ಲಿ ಮುಳುಗಿ ಸಾವು

crime
Published on

ಹನೂರು: ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ವ್ಯಕ್ತಿಯೊಬ್ಬರು ಚೆಕ್ ಡ್ಯಾಂನಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ.

ತಾಲೂಕಿನ ಕೌದಳ್ಳಿ ಗ್ರಾಮದ ಸಿದ್ದರಾಮಶೆಟ್ಟಿ (50) ಮೃತರು. ಮಲ್ಲಯ್ಯನಪುರ ಬಳಿ ಇರುವ ಚೆಕ್ ಡ್ಯಾಂ ಬಳಿ ಬಹಿರ್ದೆಸೆಗೆ ತೆರಳಿದ್ದರು. ಈ ವೇಳೆ ಆಯತಪ್ಪಿ ಕಾಲುಜಾರಿ ಬಿದ್ದು ಡ್ಯಾಂನಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ರಾಮಾಪುರ ಪೊಲೀಸರು ಪರಿಶೀಲನೆ ನಡೆಸಿ ಮೃತದೇಹವನ್ನು ಹೊರಕ್ಕೆ ತೆಗೆಸಿದರು.

ಬಳಿಕ ಹನೂರು ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಶವಾಗಾರಕ್ಕೆ ರವಾನಿಸಿ ಶನಿವಾರ ವೈದ್ಯರಿಂದ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ನೀಡಲಾಯಿತು. ರಾಮಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net