ಅಪರಿಚಿತ ವಾಹನ ಡಿಕ್ಕಿಯಾಗಿ ಸಾವು

Raghu mirasi
Published on

ಯಲ್ಲಾಪುರ: ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಪಟ್ಟಣದ ಮಾಗೋಡ ಕ್ರಾಸ್ ಬಳಿ ಗುರುವಾರ ನಡೆದಿದೆ.

ನಾರಾಯಣಪುರದ ರಾಘು ಮಿರಾಶಿ (22) ಮೃತ ಸವಾರ. ಇನ್ನೊಬ್ಬ ಸವಾರ ವೆಂಕಟರಮಣ ಸಿದ್ದಿ ಗಾಯಗೊಂಡಿದ್ದಾರೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net