

ಸುಬ್ರಹ್ಮಣ್ಯ: ಐನೆಕಿದು ಗ್ರಾಮದ ಕುಜುಂಬಾರು ನಿವಾಸಿ ಡೀಕಯ್ಯ ಉಪ್ಪಳಿಕೆ(55) ಎಂಬುವರು ಶನಿವಾರ ಸಂಜೆ ಸುಬ್ರಹ್ಮಣ್ಯದ ಕೆಎಸ್‌ಆರ್‌ಸಿ ಬಸ್ ನಿಲ್ದಾಣದಲ್ಲಿದ್ದಾಗ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. ಹೃದಯಾಘಾತವಾಗಿ ಕುಸಿದುಬಿದ್ದ ಅವರನ್ನು ತಕ್ಷಣ ಕಡಬ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿತ್ತಾದರೂ ಅದಾಗಲೇ ಅವರು ಮೃತಪಟ್ಟಿದ್ದರು ಎನ್ನಲಾಗಿದೆ. ಪತ್ನಿ ಹಾಗೂ ತಾಯಿಯನ್ನು ಅಗಲಿದ್ದಾರೆ.