ಬೈಕ್ ಡಿಕ್ಕಿಯಾಗಿ ಪಾದಚಾರಿ ಸಾವು

crime
Published on

ಮದ್ದೂರು: ಪಟ್ಟಣದ ಶಿವಪುರದಲ್ಲಿ ಭಾನುವಾರ ರಾತ್ರಿ ಬೆಂಗಳೂರು-ಮೈಸೂರು ಹೆದ್ದಾರಿ ದಾಟುತ್ತಿದ್ದ ಪಾದಚಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಮೃತಪಟ್ಟಿದ್ದಾನೆ. ತಾಲೂಕಿನ ಚಾಮನಹಳ್ಳಿ ಗ್ರಾಮದ ರಾಜು (49) ಮೃತ. ಇವರು ಚಾಮನಹಳ್ಳಿ ಗ್ರಾಮಕ್ಕೆ ಬರಲು ಹೆದ್ದಾರಿ ದಾಟುತ್ತಿದ್ದ ಸಂದರ್ಭದಲ್ಲಿ ಬೈಕ್ ರಭಸವಾಗಿ ಬಂದು ಡಿಕ್ಕಿ ಹೊಡೆದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದರು. ಚಿಕಿತ್ಸೆ ಕೊಡಿಸಲು ಜಿಲ್ಲಾಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಪಟ್ಟಣದ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net