ಕೋಲಾರ: ರಾಷ್ಟ್ರೀಯ ಹೆದ್ದಾರಿ 75ರ ತಾಲೂಕಿನ ಮಡೇರಹಳ್ಳಿ ಗೇಟ್ ಬಳಿ ಬುಧವಾರ ರಾತ್ರಿ ಹಾಲಿನ ಟ್ಯಾಂಕರ್ ಹಾಗೂ ಬೊಲೆರೊ ನಡುವೆ ಸಂಭವಿಸಿದ ಅಪಘಾತದಲ್ಲಿ ಒಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಬೊಲೆರೊ ವಾಹನದಲ್ಲಿದ್ದ ಬೆಂಗಳೂರಿನ ವಿಜಯ್ಕುಮಾರ್ ಮೃತ. ಅಪಘಾತದ ರಭಸಕ್ಕೆ ಬೊಲೆರೊ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಮೃತದೇಹವು ವಾಹನದಲ್ಲೇ ಸಿಲುಕಿಕೊಂಡಿತ್ತು.ಅದನ್ನು ಹೊರತೆಗೆಯಲು ಪೊಲೀಸರು ಹರಸಾಹಸ ಪಡಬೇಕಾಯಿತು. ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿಯ ಒಂದು ಭಾಗದಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಕೋಲಾರ ಗ್ರಾಮಾಂತರ ಠಾಣೆೆಯ ಪಿಎಸ್ಐ ಭಾರತಿ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರ