

ಅರಕಲಗೂಡು: ಬೈಕ್ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗೊರೂರು ಗ್ರಾಮದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಗೊರೂರು ಪ್ರೀತಮ್ (29) ಮೃತ. ಈತ ಅರಕಲಗೂಡು ಸರ್ಕಾರಿ ಆಸ್ಪತ್ರೆಯಲ್ಲಿ ಫಾರ್ಮಸಿಸ್ಟ್
ಆಗಿ ಸೇವೆ ಸಲ್ಲಿಸುತ್ತಿದ್ದರು. ಕಳೆದ ಗುರುವಾರ ಕೆಲಸ ಮುಗಿಸಿಕೊಂಡು ಗೊರೂರಿಗೆ ತೆರಳುವಾಗ ವಡ್ಡರಹಳ್ಳಿ ಬಳಿ ಎದುರಿನಿಂದ ಬಂದ ಬೈಕ್ ಗೆ ಡಿಕ್ಕಿಯಾಗಿ ಗಾಯಗೊಂಡು ಹಾಸನ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ಸಂಜೆ ಮೃತಪಟ್ಟಿದ್ದಾರೆ. ಸೋಮವಾರ ಗೊರೂರಿನಲ್ಲಿ ಅಂತ್ಯಕ್ರಿಯೆ ನಡೆಯಿತು.