ಉರುಳಿಗೆ ಸಿಲುಕಿ ಚಿರತೆ ಸಾವು ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Published on

ಸುಳ್ಯ: ಕಾಡುಪ್ರಾಣಿಗೆ ಇಟ್ಟ ಉರುಳಿಗೆ ಸಿಲುಕಿ ಚಿರತೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಅರಣ್ಯ ಇಲಾಖೆ ವಶಕ್ಕೆ ಪಡೆದಿದೆ.

ಜಾಗದ ಮಾಲೀಕ ಅಜ್ಜಾವರ ಪಡ್ಡಂಬೈಲಿನ ಜಯರಾಮ ಹಾಗೂ ಪೃಥ್ವಿ ಆರೋಪಿಗಳು. ಅಜ್ಜಾವರ ಗ್ರಾಮದ ಪಡ್ಡಂಬೈಲು ಎಂಬಲ್ಲಿ ಉರುಳಿಗೆ ಸಿಲುಕಿ ಸುಮಾರು ಒಂದೂವರೆ ವರ್ಷ ಪ್ರಾಯದ ಹೆಣ್ಣು ಚಿರತೆ ಮರಿ ಮಂಗಳವಾರ ಸಾವಿಗೀಡಾಗಿತ್ತು. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಸುಳ್ಯ ರೇಂಜರ್ ಮಂಜುನಾಥ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಜಾಗದ ಮಾಲೀಕರ ಸಹಿತ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದರು.

ಉರುಳಿಗೆ ಬಿದ್ದ ಚಿರತೆಯನ್ನು ರಕ್ಷಿಸುವ ಸಲುವಾಗಿ ಅರಣ್ಯಾಧಿಕಾರಿಗಳಿಗೆ ಕರೆ ಮಾಡಲಾಗಿತ್ತು. ಆದರೆ ಅವರು ಸ್ಥಳಕ್ಕೆ ಬರುವಷ್ಟರಲ್ಲಿ ಚಿರತೆ ಮೃತಪಟ್ಟಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net