

ಮೈಸೂರು: ಅನಾರೋಗ್ಯದಿಂದ ಬಳಲುತ್ತಿದ್ದ ನಗರದ ಕೇಂದ್ರ ಕಾರಾಗೃಹದ ವಿಚಾರಣಾಧೀನ ಕೈದಿ ಭಾನುವಾರ ಕೆ.ಆರ್.ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಚೆಕ್ ಬೌನ್ಸ್ ಪ್ರಕರಣವೊಂದರಲ್ಲಿ ಜೈಲು ಸೇರಿದ್ದ ನಗರದ ಕುಂಬಾರಕೊಪ್ಪಲಿನ ನಿವಾಸಿ ನರಸಿಂಹ(40) ಮೃತಪಟ್ಟವರು.
ಚೆಕ್ ಬೌನ್ಸ್ ಪ್ರಕರಣದ ಆರೋಪದ ಮೇಲೆ ನರಸಿಂಹ ಅವರನ್ನು ವಿವಿ ಪುರಂ ಠಾಣೆ ಪೊಲೀಸರು ಜನವರಿಯಲ್ಲಿ ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಕಳೆದ ಎರಡು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಕೆ.ಆರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಹು ಅಂಗಾಂಗ ವೈಫಲ್ಯ ಮತ್ತು ಜಾಂಡೀಸ್‌ನಿಂದ ಬಳಲುತ್ತಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ಮೃತಪಟ್ಟಿದ್ದಾರೆ.
ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಕುಟುಂಬಸ್ಥರಿಗೆ ನೀಡಲಾಗಿದೆ. ಮಂಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.