

ಹಗರಿಬೊಮ್ಮನಹಳ್ಳಿ: ಪಟ್ಟಣದ ಭೋವಿ ಕಾಲನಿಯಲ್ಲಿ ವಕೀಲ ನಾಗರಾಜ(42) ಶನಿವಾರ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಪ್ರೀತಿಸಿ ಮದುವೆಯಾಗಿದ್ದ ಇವರು 8 ವರ್ಷದಿಂದ ಕುಟುಂಬದಿಂದ ದೂರವಾಗಿ ಪಟ್ಟಣದ ಮನೆಯಲ್ಲಿ ಒಬ್ಬರೇ ವಾಸವಾಗಿದ್ದರು. ಒಂಟಿತನದಿಂದ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ.
‘ನನ್ನ ಸಾವಿಗೆ ನಾನೇ ಕಾರಣ’ ಎಂದು ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.