

ರಾಣೆಬೆನ್ನೂರ: ಸಾಲಬಾಧೆಯಿಂದ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಅರೇಮಲ್ಲಾಪುರ ಗ್ರಾಮದಲ್ಲಿ ಭಾನುವಾರ ನಡೆದಿದೆ.
ಯಶವಂತ ಕೃಷ್ಣಾಜಿ ಸಣ್ಣಬೊಮ್ಮಾಜಿ (45) ಮೃತ ರೈತ.
ಇವರು ಬ್ಯಾಂಕ್ ಹಾಗೂ ಕೈಗಡವಾಗಿ 2.90 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಜಮೀನಿನಲ್ಲಿ ಬೆಳೆದಿದ್ದ ಬೆಳೆ ಸಂರ್ಪೂಣ ಹಾಳಾಗಿ ಹೋಗಿತ್ತು. ಇದರಿಂದ ಸಾಲ ತೀರಿಸಲಾಗದೆ ಮನನೊಂದು ಮನೆಯಲ್ಲಿಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.