

ರಾಣೆಬೆನ್ನೂರ: ಸಾಲಬಾಧೆಯಿಂದ ರೈತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಅಸುಂಡಿ ಗ್ರಾಮದಲ್ಲಿ ಬುಧವಾರ ಸಂಭವಿಸಿದೆ.
ಚೌಡಪ್ಪ ದ್ಯಾಮಪ್ಪ ಕೆಂಚಮ್ಮನವರ (65) ಮೃತ ರೈತ.
ಈತ ಬ್ಯಾಂಕ್ ಹಾಗೂ ಕೈಗಡವಾಗಿ ಸಾಲ ಮಾಡಿಕೊಂಡಿದ್ದ. ಆದರೆ, ಜಮೀನಿನಲ್ಲಿ ಸರಿಯಾಗಿ ಬೆಳೆ ಬಾರದ ಕಾರಣ ಸಾಲ ತೀರಿಸಲಾಗದೆ ಜಮೀನಿನಲ್ಲಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಈ ಕುರಿತು ಹಲಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.