ಸಾಲದ ಹೊರೆ ಬಿಜೆಪಿ ಸಾಧನೆ

D SUDAKAR D HYR
Published on

ಹಿರಿಯೂರು: ರಾಜ್ಯದಲ್ಲಿ ನಾಲ್ಕು ವರ್ಷ ಆಡಳಿತ ನಡೆಸಿದ ಬಿಜೆಪಿ ನೇತೃತ್ವದ ಸರ್ಕಾರ 3.30 ಲಕ್ಷ ಕೋಟಿ ಸಾಲದ ಹೊರೆ ಹೊರೆಸಿದೆ ಎಂದು ಸಚಿವ ಡಿ.ಸುಧಾಕರ್ ಹೇಳಿದರು.

ಹಿರಿಯೂರು ನಗರದಲ್ಲಿ ಮಂಗಳವಾರ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆಯಲ್ಲಿ ಮಾತನಾಡಿ, ಪ್ರಸ್ತುತ ರಾಜ್ಯದ ಸಾಲ 5.70 ಲಕ್ಷ ಕೋಟಿಗೆ ಏರಿಕೆಯಾಗಿದೆ. 2013-2018 ರ ಅವಧಿಯಲ್ಲಿ ರಾಜ್ಯದ ಸಾಲ 2.34 ಲಕ್ಷ ಕೋಟಿ ಇತ್ತು, ರಾಜ್ಯವನ್ನು ಸಾಲದ ಸುಳಿಗೆ ಸಿಕ್ಕಿಸಿದ್ದು ಬಿಜೆಪಿ ಸರ್ಕಾರದ ಸಾಧನೆ ಎಂದು ದೂರಿದರು.

ಆರ್ಥಿಕ ಹೊರೆಯಾಗದ ರೀತಿ ಪಂಚ ಗ್ಯಾರಂಟಿ ಯೋಜನೆ ಜಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಸ್ಟರ್ ಪ್ಲಾನ್ ರೂಪಿಸಿದ್ದು, ಈಗಾಗಲೇ ನಾಲ್ಕು ಗ್ಯಾರಂಟಿ ಯೋಜನೆ ಯಶಸ್ವಿಯಾಗಿ ಜಾರಿಗೊಳಿಸಿದ್ದಾರೆ. ಯೋಜನೆಗಳಿಗೆ ಅಭೂತಪೂರ್ವ ಜನ ಬೆಂಬಲ ವ್ಯಕ್ತವಾಗುತ್ತಿದೆ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net