

ರಾಣೆಬೆನ್ನೂರ: ಅಪಘಾತವೊಂದರಲ್ಲಿ ಗಾಯಗೊಂಡು ಗುಣವಾಗದೆ ಹಾಗೂ ಆಸ್ಪತ್ರೆಗೆ ತೋರಿಸಲು ಮಾಡಿದ ಸಾಲ ತೀರಿಸಲಾಗದೆ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಇಟಗಿ ಗ್ರಾಮದಲ್ಲಿ ಗುರುವಾರ ನಡೆದಿದೆ.
ರಾಜನಗೌಡ ರಾಜನಗೌಡ ಕರೇಗೌಡ ಕರೇಗೌಡ್ರ ಆತ್ಮಹತ್ಯೆ ಮಾಡಿಕೊಂಡವರು.
ಇವರು 2022ರಲ್ಲಿ ಅಪಘಾತವೊಂದರಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಆಸ್ಪತ್ರೆಗೆ ತೋರಿಸಿದರೂ ಗುಣವಾಗಿರಲಿಲ್ಲ. ಅಲ್ಲದೆ ಅದಕ್ಕಾಗಿ ಸಾಲ ಕೂಡ ಮಾಡಿಕೊಂಡಿದ್ದರು. ಇದರಿಂದ ಮನನೊಂದು ಮನೆಯಲ್ಲಿಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಈ ಕುರಿತು ಹಲಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.