

ಕುಶಾಲನಗರ: ತಾಲೂಕಿನ ಗುಡ್ಡೆಹೊಸೂರಲ್ಲಿ ಗುರುವಾರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರುಕ್ಮಿಣಿ ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನೇತೃತ್ವದಲ್ಲಿ ಕರ ವಸೂಲಿ ಮಾಸಾಚರಣೆಗೆ ಚಾಲನೆ ದೊರೆಯಿತು.
ಕರವಸೂಲಿ ಮಾಸಾಚರಣೆಯಲ್ಲಿ ತಾಲೂಕು ಪಂಚಾಯಿತಿ ಇಒ ಪರಮೇಶ್ ಕುಮಾರ್ ಪಾಲ್ಗೊಂಡು ಕರವಸೂಲಾತಿಗೆ ಉತ್ತೇಜನ ನೀಡಿದರು.
ಸಾರ್ವಜನಿಕರು ತಮ್ಮ ಮನೆ ಮತ್ತು ನೀರಿನ ತೆರಿಗೆಯನ್ನು ಸಕಾಲದಲ್ಲಿ ಗ್ರಾಮ ಪಂಚಾಯಿತಿಗೆ ಪಾವತಿಸುವ ಮೂಲಕ ಪಂಚಾಯಿತಿ ಅಭಿವೃದ್ಧಿಗೆ ಸಹಕಾರ ನೀಡಬೇಕೆಂದು ಮನವಿ ಮಾಡಿದರು.
ಪಂಚಾಯತ್ ರಾಜ್‌ನ ಸಹಾಯಕ ನಿರ್ದೇಶಕ ಶ್ರೀನಿವಾಸ್, ಗ್ರಾಪಂ ಸದಸ್ಯರಾದ ಶಿವಪ್ಪ, ಪ್ರವೀಣ್, ನಿತ್ಯಾನಂದ, ಪ್ರದೀಪ್, ಉಷಾ, ಸೌಮ್ಯಾ, ಉಮಾ ಹಾಗೂ ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದರು.