ಸಾಲಬಾಧೆಯಿಂದ ವಿದ್ಯುತ್ ಹಿಡಿದು ರೈತ ಆತ್ಮಹತ್ಯೆ

Crime_3.jpg
Published on

ಹಾವೇರಿ: ಸಾಲಬಾಧೆಯಿಂದ ರೈತರೊಬ್ಬರು ವಿದ್ಯುತ್ ತಂತಿ ಹಿಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ದೇವಗಿರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.
ಶಿದ್ದಪ್ಪ ಗಿರಿಮಲ್ಲಪ್ಪ ಮ್ಯಾಗಲಮನಿ (45) ಮೃತ ರೈತ.
ಇವರು 5 ಎಕರೆ ಜಮೀನು ಹೊಂದಿದ್ದು ಬ್ಯಾಂಕ್ ಹಾಗೂ ಕೈಗಡವಾಗಿ 3.75 ಲಕ್ಷ ರೂ. ಸಾಲ ಮಾಡಿಕೊಂಡು ಕೃಷಿ ಮಾಡಿದ್ದರು. ಆದರೆ, ಮಳೆ ಸರಿಯಾಗಿ ಬಾರದ ಕಾರಣ ಮನೆಯಲ್ಲಿ ವಿದ್ಯುತ್ ತಂತಿ ಹಿಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net