

ಹಾವೇರಿ: ಸಾಲಬಾಧೆಯಿಂದ ರೈತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಯಲಗಚ್ಛ ಗ್ರಾಮದಲ್ಲಿ ಭಾನುವಾರ ಸಂಭವಿಸಿದೆ.
ಗ್ರಾಮದ ಪರಸಪ್ಪ ಭಜಂತ್ರಿ (25) ಮೃತ ರೈತ.
ಈತ ಬ್ಯಾಂಕ್ ಹಾಗೂ ಕೈಗಡವಾಗಿ ಸಾಲ ಮಾಡಿಕೊಂಡು ಕೃಷಿ ಮಾಡಿಕೊಂಡಿದ್ದ. ಆದರೆ, ಅತಿಯಾದ ಮಳೆಯಿಂದ ಬೆಳೆಗಳು ಹಾನಿಯಾಗಿದ್ದವು. ಇದರಿಂದ ಮನನೊಂದು ಜಮೀನುವೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಕುರಿತು ಗುತ್ತಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.