ಸಾಲಬಾಧೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ರೈತ

Formar Suside+1
Published on

ರಾಣೆಬೆನ್ನೂರ: ಸಾಲಬಾಧೆಯಿಂದ ರೈತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ತುಮ್ಮಿನಕಟ್ಟಿ ಗ್ರಾಮದಲ್ಲಿ ಭಾನುವಾರ ಸಂಭವಿಸಿದೆ. ಗಿರೀಶ ತಿಮ್ಮನಗೌಡ ಮುರುಡಪ್ಪನವರ (32) ಮೃತ ರೈತ. ಈತ 5.29 ಎಕರೆ ಜಮೀನು ಹೊಂದಿದ್ದು, ಬ್ಯಾಂಕ್ ಹಾಗೂ ಕೈಗಡವಾಗಿ 6.50 ಲಕ್ಷ ರೂ. ಸಾಲ ಮಾಡಿಕೊಂಡು ಕೃಷಿ ಮಾಡಿದ್ದರು. ಆದರೆ, ಎರಡ್ಮೂರು ವರ್ಷದಿಂದ ಅತಿವೃಷ್ಠಿ ಹಾಗೂ ಅನಾವೃಷ್ಠಿಯಿಂದ ಬೆಳೆಗಳು ಹಾಳಾಗಿದ್ದವು. ಇದರಿಂದ ಸಾಲ ತೀರಿಸಲಾಗದೆ ತನ್ನ ಮನೆಯಲ್ಲಿಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಕುರಿತು ಹಲಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net