ಸಾಲಬಾಧೆಯಿಂದ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

Formar Suside+1
Published on

ಹಾನಗಲ್ಲ: ಸಾಲಬಾಧೆಯಿಂದ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಟನೆ ತಾಲೂಕಿನ ನಲ್ಲೀಬಿಡ ಗ್ರಾಮದಲ್ಲಿ ಗುರುವಾರ ನಡೆದಿದೆ.

ಗ್ರಾಮದ ತಿಮ್ಮಣ್ಣ ರಾಮಪ್ಪ ದೊಡ್ಡಮನಿ (65) ಆತ್ಮಹತ್ಯೆ ಮಾಡಿಕೊಂಡ ರೈತ.

ಇವರು ಕೃಷಿಗಾಗಿ ಬ್ಯಾಂಕ್​ನಲ್ಲಿ 2.30 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಜಮೀನಿನಲ್ಲಿ ಬೆಳೆ ಸರಿಯಾಗಿ ಬಾರದ ಕಾರಣ ಮನನೊಂದು ಜಮೀನಿನಲ್ಲಿಯೆ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಆಡೂರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net