

ಹಾವೇರಿ: ಸಾಲಬಾಧೆಯಿಂದ ರೈತನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಗುಯಿಲಗುಂದಿ ಗ್ರಾಮದಲ್ಲಿ ಗುರುವಾರ ಸಂಭವಿಸಿದೆ.
ರುದ್ರಗೌಡ ಫಕ್ಕೀರಗೌಡ ಭರಮಗೌಡ್ರ (61) ಮೃತ ರೈತ.
ಇವರು 2.30 ಎಕರೆ ಜಮೀನು ಹೊಂದಿದ್ದು, ಬ್ಯಾಂಕ್ ಹಾಗೂ ಸಹಕಾರಿ ಸಂಘ ಸೇರಿ 15 ಲಕ್ಷ ರೂ. ಸಾಲ ಮಾಡಿಕೊಂಡು ಕೃಷಿ ಮಾಡಿದ್ದರು. ಆದರೆ, ಬೆಳೆ ಸರಿಯಾಗ ಬಾರದ ಕಾರಣ ಬೆಳೆ ಹಾನಿಯಾಗಿತ್ತು. ಅಲ್ಲದೆ ಸಾಲ ಮರುಪಾವತಿಸುವಂತೆ ಬ್ಯಾಂಕ್‌ನಿಂದ ನೋಟಿಸ್ ಜಾರಿ ಮಾಡಲಾಗಿತ್ತು. ಇದರಿಂದ ಮನನೊಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಈ ಕುರಿತು ಗುತ್ತಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.