

ರಾಣೆಬೆನ್ನೂರ: ಸಾಲಬಾಧೆಯಿಂದ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಐರಣಿ ಗ್ರಾಮದಲ್ಲಿ ಗುರುವಾರ ನಡೆದಿದೆ.
ಸಂತೋಷ ಹನುಮಂತಪ್ಪ ಹೊಸಮನಿ (28) ಮೃತ ರೈತ.
ಇವರು ಬ್ಯಾಂಕ್ ಹಾಗೂ ವಿವಿಧ ಸಂಘ-ಸಂಸ್ಥೆಗಳಲ್ಲಿ 2.75 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಜಮೀನಿನಲ್ಲಿ ಬೆಳೆದಿದ್ದ ಬೆಳೆ ಸಂರ್ಪೂಣ ಹಾಳಾಗಿದ್ದರಿಂದ ಮನನೊಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.