ಸಾಲಬಾಧೆಯಿಂದ ವಿಷ ಸೇವಿಸಿ ರೈತ ಆತ್ಮಹತ್ಯೆ

Crime Logo
Published on

ಹಾನಗಲ್ಲ: ಸಾಲಬಾಧೆಯಿಂದ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಜಂಗಿನಕೊಪ್ಪ ಗ್ರಾಮದಲ್ಲಿ ಸೋಮವಾರ ನಡೆದಿದೆ.

ಗ್ರಾಮದ ಆನಂದಪ್ಪ ರಾಮಪ್ಪ ಲಮಾಣಿ (60) ಮೃತ ರೈತ.

ಇವರು ಬ್ಯಾಂಕ್​ನಲ್ಲಿ 4 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಜಮೀನಿನಲ್ಲಿ ಬೆಳೆದಿದ್ದ ಬೆಳೆ ಅತಿವೃಷ್ಟಿಯಿಂದ ಸಂಪೂರ್ಣ ಹಾಳಾಗಿತ್ತು. ಇದರಿಂದ ಸಾಲ ತೀರಿಸಲಾಗದೆ ಮನೆಯಲ್ಲಿಯೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿದ್ದಾರೆ ಎನ್ನಲಾಗಿದೆ. ಈ ಕುರಿತು ಹಾನಗಲ್ಲ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net