ಸಾಲಬಾಧೆಯಿಂದ ರೈತ ಆತ್ಮಹತ್ಯೆ; ರೈತರಿಂದ ಪ್ರತಿಭಟನೆ

2-RNR-07A
Published on

ರಾಣೆಬೆನ್ನೂರ: ಸಾಲಬಾಧೆಯಿಂದ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಟನೆ ತಾಲೂಕಿನ ತಿರುಮಲದೇವರಕೊಪ್ಪ ಗ್ರಾಮದಲ್ಲಿ ಹೊಸ ವರ್ಷದ ಮೊದಲ ದಿನವಾದ ಬುಧವಾರ ರಾತ್ರಿ ಸಂಭವಿಸಿದೆ.

ಗ್ರಾಮದ ರವಿ ಹೊನ್ನಪ್ಪ ಓಲೇಕಾರ (34) ಆತ್ಮಹತ್ಯೆ ಮಾಡಿಕೊಂಡ ರೈತ.

ಇವರು ಕೃಷಿಗಾಗಿ ಬ್ಯಾಂಕ್​ ಹಾಗೂ ಕೈಗಡವಾಗಿ ಸಾಲ ಮಾಡಿಕೊಂಡಿದ್ದರು. ಆದರೆ, ಬೆಳೆ ಹಾಳಾಗಿದ್ದರಿಂದ ಸಾಲ ತೀರಿಸಲಾಗದೆ ಮನನೊಂದು ಮನೆಯಲ್ಲಿಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಹಲಗೇರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರೈತ ಸಂದಿಂದ ಪ್ರತಿಭಟನೆ...

ರೈತ ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆಯಲ್ಲಿ ರಾಜ್ಯ ರೈತ ಸಂದ ವತಿಯಿಂದ ನಗರದ ಸರ್ಕಾರಿ ಆಸ್ಪತ್ರೆಯ ಶವಾಗಾರದ ಎದುರು ಗುರುವಾರ ಪ್ರತಿಭಟನೆ ನಡೆಸಲಾಯಿತು.

ರೈತ ಸಂದ ಸಂಟನಾ ಕಾರ್ಯದಶಿರ್ ರವೀಂದ್ರಗೌಡ ಪಾಟೀಲ ಮಾತನಾಡಿ, ರಾಜ್ಯ ಹಾಗೂ ದೇಶದಲ್ಲಿ ರೈತ ಆತ್ಮಹತ್ಯೆ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಆದ್ದರಿಂದ ಕೇಂದ್ರ ಸರ್ಕಾರ ಕೂಡಲೇ ರೈತರ ಸಾಲ ಮನ್ನಾ ಮಾಡಬೇಕು. ಇಲ್ಲವಾದರೆ ಮುಂದಿನ ದಿನದಲ್ಲಿ ಇನ್ನೂ ಹೆಚ್ಚಿನ ರೈತರು ಆತ್ಮಹತ್ಯೆ ದಾರಿ ಹಿಡಿಯಲಿದ್ದಾರೆ. ಅಲ್ಲದೆ ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಳ್ಳುವ ರೈತರಿಗೆ 5 ಲಕ್ಷ ರೂ. ಬದಲು 25 ಲಕ್ಷ ರೂ. ಪರಿಹಾರ ಘೋಷಿಸಬೇಕು ಎಂದು ಒತ್ತಾಯಿಸಿದರು.

ಸ್ಥಳಕ್ಕೆ ಬಂದ ಕಂದಾಯ ನಿರೀಕ್ಷಕ ಅಶೋಕ ಅರಳೇಶ್ವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಪ್ರಮುಖರಾದ ಚಂದ್ರಣ್ಣ ಬೇಡರ, ಕೃಷ್ಣಮೂತಿರ್ ಲಮಾಣಿ, ರಂಗಪ್ಪ ಪೂಜಾರ, ಗೋವಿಂದಪ್ಪ ತಳವಾರ, ಸುರೇಶ ತಳವಾರ, ಸೋಮರಡ್ಡಿ ಮೈದೂರ, ಚನ್ನಬಸನಗೌಡ ಗೌಡರ, ಚಂದ್ರು ಓಲೇಕಾರ, ಸುವರ್ಣಮ್ಮ ಓಲೇಕಾರ, ರೇಖಾ ಓಲೇಕಾರ, ಬಸವರಾಜ ನಡುವಿನಮನಿ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net