

ರಾಣೆಬೆನ್ನೂರ: ಸಾಲಬಾಧೆಯಿಂದ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ತಿರುಮಲದೇವರಕೊಪ್ಪ ಗ್ರಾಮದಲ್ಲಿ ನಡೆದಿದೆ.
ಪ್ರವಿಣ ಗೋವಿಂದಪ್ಪ ಹಳ್ಳಿ (29) ಮೃತ ರೈತ.
ಇವರು ಬ್ಯಾಂಕ್ನಲ್ಲಿ 2.80 ಲಕ್ಷ ರೂ. ಸಾಲ ಮಾಡಿಕೊಂಡು ರೇಷ್ಮೆ ಕೃಷಿ ಹಾಗೂ ಮೆಕ್ಕೆಜೋಳ ಬೆಳೆದಿದ್ದರು. ಆದರೆ, ಅನಾವೃಷ್ಟಿಯಿಂದ ಬೆಳೆ ಹಾಳಾಗಿತ್ತು. ಇದರಿಂದ ಮನನೊಂದು ಮನೆಯಲ್ಲಿಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಹಲಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.