ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

hanging-harry-light-pull12.jpg
Published on

ಮಾಂಜರಿ: ಸಾಲಬಾಧೆಯಿಂದಾಗಿ ರೈತನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕೋಡಿ ತಾಲೂಕಿನ ರುಪಿನಾಳ ಗ್ರಾಮದಲ್ಲಿ ಭಾನುವಾರ ನಡೆದಿದೆ. ಶಂಕರ ಅಕ್ಕೋಳೆ (38) ಮೃತ ರೈತ.

3 ಎಕರೆ ಕೃಷಿಭೂಮಿ ಹೊಂದಿದ್ದ ಶಂಕರ, ಕೃಷಿಗಾಗಿ ಬ್ಯಾಂಕ್‌ಗಳಲ್ಲಿ 3.5 ಲಕ್ಷ ರೂ. ಸಾಲ ಮಾಡಿದ್ದ. ಆದರೆ, ಸಕಾಲಕ್ಕೆ ಸಾಲ ಮರುಪಾವತಿ ಮಾಡಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರಿಗೆ ಪತ್ನಿ, ಇಬ್ಬರು ಮಕ್ಕಳಿದ್ದಾರೆ. ಅಂಕಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net