ಸಾಲಬಾಧೆಯಿಂದ ವಿಷ ಸೇವಿಸಿ ರೈತ ಆತ್ಮಹತ್ಯೆ

Crime Logo
Published on

ರಟ್ಟಿಹಳ್ಳಿ: ಸಾಲಬಾಧೆಯಿಂದ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಹರಕನಾಳ ಗ್ರಾಮದಲ್ಲಿ ಭಾನುವಾರ ನಡೆದಿದೆ.
ಗ್ರಾಮದ ಮೈಲಾರೆಪ್ಪ ಗುಡ್ಡಪ್ಪ ತಿಪ್ಪಳೇರ (53) ಮೃತ ರೈತ.
ಇವರು 3 ಎಕರೆ ಜಮೀನು ಹೊಂದಿದ್ದು, 6 ಲಕ್ಷ ರೂ. ಸಾಲ ಮಾಡಿಕೊಂಡು ಕರಷಿ ಮಾಡಿದ್ದರು. ಆದರೆ, ಮಳೆ ಸರಿಯಾಗಿ ಬಾರದ ಕಾರಣ ಬೆಳೆ ಹಾಳಾಗಿ ಹೋಗಿತ್ತು. ಇದರಿಂದ ಬೇಸತ್ತು ಜಮೀನಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ರಟ್ಟಿಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net