ಸಾಲಬಾಧೆಯಿಂದ ವಿಷ ಸೇವಿಸಿ ರೈತ ಆತ್ಮಹತ್ಯೆ

Crime Logo
Published on

ಹಾವೇರಿ: ಸಾಲಬಾಧೆಯಿಂದ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ನೆಗಳೂರು ಗ್ರಾಮದಲ್ಲಿ ಭಾನುವಾರ ನಡೆದಿದೆ.

ಭರಮರೆಡ್ಡಿ ಬಸವರೆಡ್ಡಿ ಜಾಲಿಕೊಪ್ಪ (76) ಮೃತ ರೈತ.

ಇವರು ಕೃಷಿಗಾಗಿ 8.75 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಆದರೆ ಹೆಚ್ಚಿನ ಮಳೆಯಿಂದಾಗಿ ಜಮೀನಿನಲ್ಲಿ ಬೆಳೆಗಳು ಹಾಳಾಗಿದ್ದವು. ಇದರಿಂದ ಸಾಲ ತೀರಿಸಲಾಗದೆ ಮನನೊಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಗುತ್ತಲ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net