

ಸಾಲಬಾಧೆ, ರೈತ, ವಿಷ, ಸೇವಿಸಿ, ಆತ್ಮಹತ್ಯೆ, Debt-ridden farmer commits suicide by consuming poison
ಹಾವೇರಿ: ಸಾಲಬಾಧೆಯಿಂದ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಕರ್ಜಗಿ ಗ್ರಾಮದಲ್ಲಿ ಭಾನುವಾರ ನಡೆದಿದೆ.
ರಮೇಶಪ್ಪ ಮಹದೇವಪ್ಪ ವಾಳದ (65) ಮೃತ ರೈತ.
ಇವರು ಕೃಷಿಗಾಗಿ ಬ್ಯಾಂಕ್ನಲ್ಲಿ 1.35 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಜಮೀನಿನಲ್ಲಿ ಬೆಳೆದಿದ್ದ ಬೆಳೆ ಮಳೆಯಿಂದಾಗಿ ಹಾಳಾದ ಕಾರಣ ಸಾಲ ತೀರಿಸಲಾಗದೆ ಮನನೊಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.