

ರಾಣೆಬೆನ್ನೂರ: ಸಾಲಬಾಧೆಯಿಂದ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಮಾಗೋಡ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಕರಬಸಪ್ಪ ಉಜ್ಜಪ್ಪ ಕಮದೋಡ (31) ಮೃತ ರೈತ.
ಇವರು 4.28 ಜಮೀನು ಹೊಂದಿದ್ದು ಕೃಷಿಗಾಗಿ ಬ್ಯಾಂಕ್ನಲ್ಲಿ 3 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಅತಿವೃಷ್ಟಿ ಮತ್ತು ಅನಾವೃಷ್ಟಿಯಿಂದ ಬೆಳೆ ಹಾಳಾಗಿತ್ತು. ಇದರಿಂದ ಸಾಲ ತೀರಿಸಲಾಗದೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಹಲಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.