ಸಾಲಬಾಧೆಯಿಂದ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

Formar Suside+1
Published on

ರಾಣೆಬೆನ್ನೂರ: ಸಾಲಬಾಧೆಯಿಂದ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಇಟಗಿ ಗ್ರಾಮದಲ್ಲಿ ಸೋಮವಾರ ನಡೆದಿದೆ.

ಗಣೇಶ ನಿಂಗಪ್ಪ ಕರೆಚಿಕ್ಕಪ್ಪನವರ (35) ಆತ್ಮಹತ್ಯೆ ಮಾಡಿಕೊಂಡ ರೈತ.

ಇವರು 22 ಎಕರೆ ಜಮೀನು ಹೊಂದಿದ್ದು ಕೃಷಿಗಾಗಿ ಬ್ಯಾಂಕ್​ನಲ್ಲಿ 20 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಆದರೆ, ಜಮೀನಿನಲ್ಲಿ ಬೆಳೆದಿದ್ದ ಬೆಳೆ ಸಂರ್ಪೂಣ ಹಾಳಾಗಿ ಹೋಗಿತ್ತು. ಇದರಿಂದ ಮನನೊಂದು ಮನೆಯಲ್ಲಿಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಹಲಗೇರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net