ಸಾಲಬಾಧೆಯಿಂದ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

Formar Suside+1
Published on

ರಾಣೆಬೆನ್ನೂರ: ಸಾಲಬಾಧೆಯಿಂದ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಅರೇಮಲ್ಲಾಪುರ ಗ್ರಾಮದಲ್ಲಿ ನಡೆದಿದೆ.

ಮಲ್ಲೇಶ ಕೋಟ್ರಪ್ಪ ಸುರ್ವೇ (26) ಮೃತ ರೈತ.

ಇವರು ಬೆಳೆಗಾಗಿ 4.60 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಆದರೆ, ಮಳೆ ಬಾರದೆ ಬೆಳೆ ಹಾಳಾಗಿದ್ದರಿಂದ ಸಾಲ ತೀರಿಸಲಾಗದೆ ಜಮೀನಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಗ್ರಾಮೀಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net