ಸಾಲಬಾಧೆಯಿಂದ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

Formar Suside+1
Published on

ಹಾನಗಲ್ಲ: ಸಾಲಬಾಧೆಯಿಂದ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ನರೇಗಲ್ಲ ಗ್ರಾಮದಲ್ಲಿ ಗುರುವಾರ ನಡೆದಿದೆ.

ಪರಸಪ್ಪ ಶಿವಪ್ಪ ಕರಿಸಿದ್ದಪ್ಪನವರ (43) ಮೃತ ರೈತ.

ಇವರು ಕೃಷಿಗಾಗಿ ವಿವಿಧ ಸಂಘ ಸಂಸ್ಥೆಗಳಲ್ಲಿ 3.85 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಆದರೆ, ಅತಿವೃಷ್ಟಿಯಿಂದ ಜಮೀನಿನಲ್ಲಿ ಬೆಳೆದಿದ್ದ ಬೆಳೆ ಹಾಳಾಗಿ ಹೋಗಿದ್ದವು. ಇದರಿಂದ ಸಾಲ ತೀರಿಸಲಾಗದೆ ಮನನೊಂದು ಮನೆಯಲ್ಲಿಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಆಡೂರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net