ಸಾಲಬಾಧೆಯಿಂದ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

Formar Suside+1
Published on

ರಾಣೆಬೆನ್ನೂರ: ಸಾಲಬಾಧೆಯಿಂದ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಬೆನಕನಕೊಂಡ ಗ್ರಾಮದಲ್ಲಿ ಸೋಮವಾರ ನಡೆದಿದೆ.

ನಾಗರಾಜ ಬಸವಣ್ಣೆಪ್ಪ ಕೊಪ್ಪದ (37) ಮೃತ ರೈತ.

ಇವರು ಬ್ಯಾಂಕ್​ನಲ್ಲಿ 2.50 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಜಮೀನಿನಲ್ಲಿ ಬೆಳೆದಿದ್ದ ಬೆಳೆ ಸಂರ್ಪೂಣವಾಗಿ ಹಾಳಾಗಿ ಹೋಗಿತ್ತು. ಇದರಿಂದ ಸಾಲ ತೀರಿಸಲಾಗದೆ ಮನೆಯಲ್ಲಿಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಹಲಗೇರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net