ಸಾಲಬಾಧೆಯಿಂದ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

Formar Suside+1
Published on

ಬ್ಯಾಡಗಿ: ಸಾಲಬಾಧೆಯಿಂದ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಅಳಲಗೇರಿಯಲ್ಲಿ ಗುರುವಾರ ನಡೆದಿದೆ.

ವಿಜಯಕುಮಾರ ಫಕ್ಕೀರಪ್ಪ ಮೋಟೆಬೆನ್ನೂರ (41) ಮೃತ ರೈತ.

ಇವರು ಕೃಷಿಗಾಗಿ ಬ್ಯಾಂಕ್​ನಲ್ಲಿ 2.50 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಆದರೆ, ಅತಿಯಾದ ಮಳೆಯಿಂದ ಬೆಳೆ ಹಾಳಾಗಿತ್ತು. ಇದರಿಂದ ಸಾಲ ತೀರಿಸಲಾಗದೆ ಮನನೊಂದು ಮನೆಯಲ್ಲಿಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಬ್ಯಾಡಗಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net