ಸಾಲಬಾಧೆಯಿಂದ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

Formar Suside+1
Published on

ಬ್ಯಾಡಗಿ: ಸಾಲಬಾಧೆಯಿಂದ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ತೆರದಹಳ್ಳಿಯಲ್ಲಿ ಮಂಗಳವಾರ ನಡೆದಿದೆ.

ಪ್ರಕಾಶ ದಾನಪ್ಪ ಪೂಜಾರ (41) ಮೃತ ರೈತ.

ಇವರು 2.16 ಎಕರೆ ಜಮೀನು ಹೊಂದಿದ್ದು ಕೃಷಿಗಾಗಿ 2 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಆದರೆ, ಅತಿವೃಷ್ಟಿಯಿಂದ ಬೆಳೆಗಳು ಹಾಳಾಗಿದ್ದವು. ಇದರಿಂದ ಸಾಲ ತೀರಿಸಲಾಗದೆ ಮನೆಯಲ್ಲಿಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಬ್ಯಾಡಗಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net